1 ಗಂಟೆ 25 ನಿಮಿಷಗಳ ಅವಧಿಗೆ ಅಮೆರಿಕಾ ಅಧ್ಯಕ್ಷೆಯಾದ ಕಮಲಾ ಹ್ಯಾರಿಸ್ !

Prasthutha|

ವಾಷಿಂಗ್ಟನ್ : ಅಮೆರಿಕ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್ 1 ಗಂಟೆ 25 ನಿಮಿಷಗಳ ಅವಧಿಗೆ ಅಮೆರಿಕದ ಅಧ್ಯಕ್ಷೆಯಾಗಿ ಅಧಿಕಾರ ಚಲಾಯಿಸಿದ್ದಾರೆ. ಭಾರತ ಮೂಲದ ಕಮಲಾ ಹ್ಯಾರಿಸ್ ಅಮೆರಿಕಾ ಅಧ್ಯಕ್ಷೀಯ ಅಧಿಕಾರ ಚಲಾಯಿಸುವ ಮೂಲಕ ಮೊದಲ ಮಹಿಳಾ ಅಧ್ಯಕ್ಷೆ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

- Advertisement -

ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಸ್ವತಹ ಅಧಿಕಾರ ಹಸ್ತಾಂತರಿಸಿದ್ದಾರೆ. ಜೋ ಬೈಡನ್ ಅವರಿಗೆ ಅರಿವಳಿಕೆ ಔಷಧಿ ನೀಡಿದ ಪರಿಣಾಮ, ತಾತ್ಕಾಲಿಕ ಅಧಿಕಾರದ ಹಸ್ತಾಂತರವನ್ನು ಘೋಷಿಸುವ ಅಧಿಕೃತ ಪತ್ರಗಳನ್ನು 10:10ಕ್ಕೆ ಕಳುಹಿಸಲಾಗಿದೆ. ಬಳಿಕ 11.35ಕ್ಕೆ ಹ್ಯಾರಿಸ್ ಕೆಲಸಕ್ಕೆ ಮರಳಿದ್ದಾರೆ ಶ್ವೇತಭವನ ಅಮೆರಿಕ ಕಾಂಗ್ರೆಸ್‌ಗೆ ತಿಳಿಸಿದೆ.

ವಾಷಿಂಗ್ಟನ್‌ನ ಹೊರಗಿನ ವಾಲ್ಟರ್ ರೀಡ್ ವೈದ್ಯಕೀಯ ಕೇಂದ್ರದಲ್ಲಿ ಬೈಡನ್ ಅವರ ಆರೋಗ್ಯ ತಪಾಸಣೆ ನಡೆಸಲಾಗಿತ್ತು. ತನ್ನ 79ನೇ ಹುಟ್ಟುಹಬ್ಬದ ಮುನ್ನಾದಿನ ಶುಕ್ರವಾರದ ಆರಂಭದಲ್ಲಿ ಕೊಲೊನೋಸ್ಕೋಪಿ ಪರೀಕ್ಷೆ ಸಮಯದಲ್ಲಿ ಬೈಡನ್‌ ಅವರಿಗೆ ಅರಿವಳಿಕೆ ಔಷಧಿಯನ್ನು ನೀಡಲಾಗಿತ್ತು. ಹೀಗಾಗಿ ಉಪಾಧ್ಯಕ್ಷರು ಅಧಿಕಾರವನ್ನು ವಹಿಸಿಕೊಳ್ಳುತ್ತಾರೆ. ಬೈಡನ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ಅಲ್ಪಾವಧಿಗೆ ಅಧಿಕಾರ ಹಸ್ತಾಂತರಿಸಿ ಆರೋಗ್ಯ ತಪಾಸಣೆಗೆ ತೆರಳಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಹೇಳಿದರು.

Join Whatsapp