ಬ್ರಿಜ್ ಭೂಷಣ್ ಹೆಸರು ಕೈಬಿಟ್ಟ ಕಂಬಳ ಸಮಿತಿ: ಆಹ್ವಾನ ಪತ್ರಿಕೆ ಬದಲಾಯಿಸುತ್ತೇವೆ ಎಂದ ಶಾಸಕ ಅಶೋಕ್ ರೈ

Prasthutha|

ಬೆಂಗಳೂರು: ನವೆಂಬರ್ 25 ಮತ್ತು 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ ತುಳುನಾಡಿನ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಕಾರ್ಯಕ್ರಮಕ್ಕೆ ಲೈಂಗಿಕ ಕಿರುಕುಳ ಪ್ರಕರಣಗಳ ಆರೋಪಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಅತಿಥಿಯಾಗಿ ಆಹ್ವಾನಿಸಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸ್ಪಷ್ಟೀಕರಣ ನೀಡಿರುವ ಪುತ್ತೂರಿನ ಕಾಂಗ್ರೆಸ್ ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ರೈ, ಬ್ರಿಜ್ ಭೂಷಣ್ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದಿದ್ದಾರೆ.

- Advertisement -


ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಹ್ವಾನ ವಿರೋಧಿಸಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಅಶೋಕ್ ರೈ ಕೋಡಿಂಬಾಡಿ, ವಿವಾದಿತ ಸಂಸದನನ್ನು ಕರೆಯದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಕೊನೇ ಕ್ಷಣದಲ್ಲಿ ಆಹ್ವಾನ ಪತ್ರಿಕೆಯನ್ನೂ ಹೊಸದಾಗಿ ಪ್ರಿಂಟ್ ಮಾಡಲು ನಿರ್ಧರಿಸಿದ್ದಾರೆ.




Join Whatsapp