ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ಕಂಪು: ನೆರವೇರಿದ ಕರೆ ಪೂಜೆ

Prasthutha|

ಬೆಂಗಳೂರು: ಇದೇ ಮೊದಲ ಬಾರಿಗೆ ಕರಾವಳಿ ಹೊರತುಪಡಿಸಿ ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿದ್ದು, ಇಂದು ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ (ಭೂಮಿ ಪೂಜೆ) ನೆರವೇರಿದೆ.

- Advertisement -


ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಂಬಳದ ಕರೆ ಪೂಜೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಡಿವಿ ಸದಾನಂದ ಗೌಡ, ಮಾಜಿ ಡಿಸಿಎಂ ಡಾ ಸಿಎನ್ ಅಶ್ವತ್ ನಾರಾಯಣ್, ಶಾಸಕ ಹ್ಯಾರೀಸ್, ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.


ತುಳುಕೂಟಕ್ಕೆ 50 ವರ್ಷದ ಸಂಭ್ರಮ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಕಂಬಳ ಆಯೋಜನೆ ಮಾಡಲಾಗುತ್ತಿದ್ದು ನವೆಂಬರ್ ತಿಂಗಳ 24, 25, 26ರಂದು ಕಂಬಳ ನನಡೆಯಲಿದೆ. ಇಂದಿನಿಂದ ಒಂದು ತಿಂಗಳ ಕಾಲ ಕಂಬಳಕ್ಕಾಗಿ ಟ್ರ್ಯಾಕ್ ಸಿದ್ದಪಡಿಸಲಾಗುತ್ತೆ.

Join Whatsapp