ಅತಿಯಾದ ಡ್ರಗ್ಸ್ ಸೇವನೆಯಿಂದ ಕಂಗನಾ ಹೇಳಿಕೆ ನೀಡುತ್ತಿದ್ದಾರೆ: ಮಹಾರಾಷ್ಟ್ರ ಸಚಿವ

Prasthutha|

ಮುಂಬೈ: ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ್ದು 2014 ರಲ್ಲಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ವಾಗ್ದಾಳಿ ನಡೆಸಿದ್ದಾರೆ.

- Advertisement -

ಅತಿಯಾದ ಡ್ರಗ್ಸ್ ಸೇವನೆಯಿಂದ ಕಂಗನಾ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಕಂಗನಾ ಹೇಳಿಕೆಯನ್ನು ಖಂಡಿಸಿದ ಅವರು ಸ್ವಾತಂತ್ರ್ಯ ಹೋರಾಟಗಾರರನ್ನು ಚಿತ್ರನಟಿ ಅವಮಾನಿಸಿದ್ದಾರೆ ಎಂದು ನವಾಬ್ ಮಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಗನಾ ಅವರ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದು ಅವರನ್ನು ಬಂಧಿಸಬೇಕು ಎಂದು ಮಲಿಕ್ ಒತ್ತಾಯಿಸಿದ್ದಾರೆ.

- Advertisement -

ಭಾರತದ ಸ್ವಾತಂತ್ರ್ಯ ಹೋರಾಟದ ಕುರಿತು ರಾಷ್ಟ್ರೀಯ ಮಾಧ್ಯಮವೊಂದರ ವಾರ್ಷಿಕ ಶೃಂಗಸಭೆಯಲ್ಲಿ ಕಂಗನಾ ರಾಣಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸಂಸದ ವರುಣ್ ಗಾಂಧಿ ರಾಣಾವತ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಕಂಗನಾ ಅವರ ಹೇಳಿಕೆಯನ್ನು ಹುಚ್ಚುತನ ಎಂದು ಕರೆಯಬೇಕೇ? ಅಥವಾ ದೇಶದ್ರೋಹ ಎಂದು ಕರೆಯಬೇಕೇ? ಎಂದು ಪ್ರಶ್ನಿಸಿದ್ದರು.

Join Whatsapp