ಬಂಧನ ಭೀತಿಯಿಂದ ಪಾರಾದ ಕಂಗನಾ, ರಂಗೋಲಿ | ಜ.8ರಂದು ವಿಚಾರಣೆಗೆ ಹಾಜರಾಗಲು ಹೈಕೋರ್ಟ್ ಆದೇಶ

Prasthutha: November 24, 2020

ಮುಂಬೈ : ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂಡೇಲ್ ಗೆ ಬಾಂಬೆ ಹೈಕೋರ್ಟ್ ಬಂಧನ ಭೀತಿಯಿಂದ ಮಧ್ಯಂತರ ರಕ್ಷಣೆ ನೀಡಿದೆ. ಆದರೆ, ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿ ಜ.8ರಂದು ಮುಂಬೈ ಪೊಲೀಸರ ಮುಂದೆ ಹಾಜರಾಗುವಂತೆ ಆದೇಶಿಸಲಾಗಿದೆ.

ಕೋಮು ದ್ವೇಷ ಪ್ರಚೋದನೆ ಮತ್ತು ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದ ಎಫ್ ಐಆರ್ ರದ್ದುಗೊಳಿಸುವಂತೆ ಕಂಗನಾ ರಣಾವತ್ ಮತ್ತು ರಂಗೋಲಿ ಚಾಂಡೇಲ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಕಂಗನಾ ರಣಾವತ್ ಮತ್ತು ಅವರ ಸಹೋದರಿ ಮೇಲೆ ದೇಶದ್ರೋಹ ಆರೋಪದಡಿ ದೂರು ನೀಡಿರುವ ಹಿನ್ನೆಲೆಯಲ್ಲಿ, ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶಿಸಿತ್ತು.

ಈ ಎಫ್ ಐಆರ್ ಗೆ ಸಂಬಂಧಿಸಿ ಕಂಗನಾ ಮತ್ತು ಆಕೆಯ ಸಹೋದರಿ ವಿರುದ್ಧ ಎರಡು ಬಾರಿ ಮುಂಬೈ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದರು. ಆದರೆ, ತಮಗೆ ಕುಟುಂಬ ಸದಸ್ಯರ ವಿವಾಹದಲ್ಲಿ ಭಾಗವಹಿಸಲಿರುವುದರಿಂದ ಆಗಮಿಸಲು ಸಾಧ್ಯವಿಲ್ಲ ಎಂದು ಅವರು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಮೂರನೇ ಸಮನ್ಸ್ ವೇಳೆ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.    

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!