“ಒಂದು ಜಿಲ್ಲೆ ಒಂದು ಉತ್ಪನ್ನ” ಯೋಜನೆಗೆ ಕಂಗನಾ ರಣಾವತ್ ರನ್ನು ರಾಯಭಾರಿಯನ್ನಾಗಿ ನೇಮಿಸಿದ ಯೋಗಿ ಸರಕಾರ

Prasthutha|

ಲಖನೌ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರಕಾರ “ಒಂದು ಜಿಲ್ಲೆ ಒಂದು ಉತ್ಪನ್ನ” ಯೋಜನೆಯ ರಾಯಭಾರಿಯಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಇಂದು ಸಿಎಂ ಆದಿತ್ಯನಾಥ್ ಅವರನ್ನು ತಮ್ಮ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ ಕಂಗನಾ “ಒಂದು ಜಿಲ್ಲೆ ಒಂದು ಉತ್ಪನ್ನ” ಯೋಜನೆಯ ಬಗ್ಗೆ ಚರ್ಚಿಸಿದ್ದಾರೆ.

- Advertisement -

ಈ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಾಲ್ , ಖ್ಯಾತ ನಟಿ ಕಂಗನಾ ರಣಾವತ್ ಇಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಭೇಟಿ ಮಾಡಿದ್ದಾರೆ. ಅಲ್ಲದೇ ಕಂಗನಾ ಇನ್ನು ನಮ್ಮ ಒಡಿಒಪಿ (ಒಂದು ಜಿಲ್ಲೆ ಒಂದು ಉತ್ಪನ್ನ) ಇದರ ರಾಯಭಾರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿರುವ 75 ಜಿಲ್ಲೆಗಳಾದ್ಯಂತ ಉತ್ಪನ್ನ ಹಾಗೂ ನಿರ್ದಿಷ್ಟ ಸಾಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ರಚಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ಒಂದು ಜಿಲ್ಲೆ ಒಂದು ಉತ್ಪನ್ನ (ಒಡಿಒಪಿ) ಯೋಜನೆಯನ್ನು ಪ್ರಾರಂಭಿಸಿದೆ.



Join Whatsapp