ಕಾಣಿಯೂರು ಗುಂಪು ಹಲ್ಲೆ ಪ್ರಕರಣ: 17 ಮಂದಿ ವಶಕ್ಕೆ

Prasthutha|

ಪುತ್ತೂರು: ಇಬ್ಬರು ಜವಳಿ ವ್ಯಾಪಾರಿಗಳಿಗೆ ಸಂಘ ಪರಿವಾರದ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

ಮಂಗಳೂರು ತಾಲ್ಲೂಕಿನ ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಎಂಬುವವರು ಜವಳಿ ವ್ಯಾಪಾರಕ್ಕೆ ತೆರಳಿದ್ದಾಗ

50 ಮಂದಿಯ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿತ್ತು. ದುಷ್ಕರ್ಮಿಗಳು ಇಬ್ಬರಿಗೂ 2 ಗಂಟೆಗಳ ಕಾಲ ನಿರಂತರವಾಗಿ ಥಳಿಸಿದ್ದರು ಮತ್ತು ಇಬ್ಬರ ಮೇಲೆ ಬೈಕ್ ಹತ್ತಿಸಿ ಕ್ರೂರವಾಗಿ ವರ್ತಿಸಿದ್ದರು. ಅವರಿಬ್ಬರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

- Advertisement -

ಈ ಘಟನೆಗೆ ಸಂಬಂಧಿಸಿದಂತೆ ಪ್ರಾರಂಭದಲ್ಲಿ ಎಸ್ ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ಅವರ ನೇತೃತ್ವದ ನಿಯೋಗ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿತ್ತು. ಮಾತ್ರವಲ್ಲ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಎಲ್ಲರನ್ನೂ ಬಂಧಿಸುವಂತೆ ಒತ್ತಾಯಿಸಿತ್ತು.

ಬಳಿಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಸೇರಿದಂತೆ ಹಲವರು ಖಂಡನೆ ವ್ಯಕ್ತಪಡಿಸಿ, ಕಿಡಿಕೇಡಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಯುವಕರು ನೀಡಿದ ದೂರಿನ ಆಧಾರದ ಮೇಲೆ 17 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಮತ್ತು ಹಲ್ಲೆಗೊಳಗಾದವರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ದ.ಕ. ಎಸ್ಪಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ



Join Whatsapp