ಕಾಣಿಯೂರು ಹಲ್ಲೆ ಪ್ರಕರಣ: ಶಾಸಕ ಯು.ಟಿ ಖಾದರ್ ಖಂಡನೆ: ಕಾನೂನು ಕ್ರಮಕ್ಕೆ ಒತ್ತಾಯಿಸಿ ಗೃಹ ಸಚಿವರೊಂದಿಗೆ ಮಾತುಕತೆಯ ಭರವಸೆ

Prasthutha|

ಮಂಗಳೂರು: ಕಾಣಿಯೂರು ವ್ಯಾಪಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿಪಕ್ಷ ಉಪ ನಾಯಕ, ಶಾಸಕ ಯು.ಟಿ.ಖಾದರ್ ಸರಕಾರವನ್ನು ಒತ್ತಾಯಿಸಿದ್ದಾರೆ.

- Advertisement -

ಘಟನೆಯ ಬಗ್ಗೆ ಖಂಡನೆ ವ್ಯಕ್ತಪಡಿಸಿದ ಯು.ಟಿ.ಖಾದರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಗೃಹ ಸಚಿವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಲು ಮನವಿ ಮಾಡುತ್ತೇನೆ ಎಂದು ಹೇಳಿದರು.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮೀನ ಮೇಷ ಎಣಿಸಿದರೆ ಜಿಲ್ಲೆಯಲ್ಲಿ ಮತ್ತೆ ಇಂಥ ಘಟನೆಗಳು ಮರುಕಳಿಸಬಹುದು. ಆದುದರಿಂದ ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ತೆಗೆದುಕೊಳ್ಳುವ ಕಠಿಣ ಕಾನೂನು ಕ್ರಮವು ಮುಂದೆ ಇಂಥ ಕುಕೃತ್ಯ ನಡೆಸುವವರಿಗೆ ಪಾಠವಾಗಬೇಕೇಂದು ಹೇಳಿದರು.

Join Whatsapp