MLA ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ: ಕನ್ನಡ ನಟ ಬಂಧನ

Prasthutha|

ಬೆಂಗಳೂರು: ಮುಂದಿನ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ವೀರೇಂದ್ರ ಬಾಬುನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

2011ರಲ್ಲಿ ತೆರೆಕಂಡಿದ್ದ ‘ಸ್ವಯಂಕೃಷಿ’ ಚಿತ್ರದ ಮೂಲಕ ನಿರ್ಮಾಪಕ, ನಿರ್ದೇಶಕ ಹಾಗೂ ನಟನಾಗಿ ವೀರೇಂದ್ರಬಾಬು ಗುರುತಿಸಿಕೊಂಡಿದ್ದರು. ಅದೇ  ಹೆಸರಿನ ಸಂಸ್ಥೆ ಹುಟ್ಟು ಹಾಕಿ ಸಾವಿರಾರು ಜನರಿಗೆ ವಂಚಿಸಿದ ಆರೋಪ ಹಿನ್ನೆಲೆ ಹೈದರಾಬಾದ್ ಪೊಲೀಸರು ಬಂಧಿಸಿದ್ದರು. ಇದೀಗ ಧಾರವಾಡ ಮೂಲದ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂಪಾಯಿ ವಂಚನೆ ಸಂಬಂಧ ನೀಡಿದ ದೂರಿನ ಮೇರೆಗೆ ವೀರೇಂದ್ರ ಬಾಬುನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಅಲ್ಲದೆ ವೀರೇಂದ್ರ ಬಾಬು ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ಮೋಸ ಮಾಡುತ್ತಿದ್ದ ಎಂದು ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ ತಿಳಿಸಿದ್ದಾರೆ.

Join Whatsapp