ಸರಕಾರದ ನೂತನ ಮಾರ್ಗಸೂಚಿಗೆ ಸಿನಿಮಾ ನಟರಿಂದ ಆಕ್ರೋಶ ; ಸರ್ಕಾರದ ನಿರ್ಧಾರದಿಂದ ಆಘಾತವಾಗಿದೆ ಎಂದ ನಟ ಸುದೀಪ್‌

Prasthutha|

►ರಾಜ್ಯ ಸರಕಾರ ಕನ್ನಡ ಚಿತ್ರ ರಂಗವನ್ನು ಕೊಲೆ ಮಾಡಿದೆ; ಪುನಿತ್ ರಾಜ್ ಕುಮಾರ್

- Advertisement -

ಬೆಂಗಳೂರು: ಕೋವಿಡ್‌–19 ನಿಯಂತ್ರಣಕ್ಕಾಗಿ ರಾಜ್ಯದ ಎಂಟು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ 50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡುವ ರಾಜ್ಯ ಸರ್ಕಾರದ ನೂತನ ಕೋವಿಡ್-19 ಮಾರ್ಗಸೂಚಿಗೆ ನಟ ಸುದೀಪ್‌ ಅವರು ಬೇಸರ ವ್ಯಕ್ತಪಡಿಸಿದ್ದು, ನಟ ಪುನೀತ್ ರಾಜ್ ಕುಮಾರ್ ರಾಜ್ಯ ಸರಕಾರವು ಕನ್ನಡ ಚಿತ್ರ ರಂಗವನ್ನು ಕೊಲೆ ಮಾಡಿದೆ ಎಂದು ಹೇಳಿದ್ದಾರೆ. 

ಸುದೀಪ್‌ ನಟನೆಯ ಕೋಟಿಗೊಬ್ಬ–3 ಚಿತ್ರವೂ ಇದೇ ತಿಂಗಳು ಬಿಡುಗಡೆಯಾಗಲು ಸಜ್ಜಾಗಿದ್ದು, ಈ ಸಂದರ್ಭದಲ್ಲೇ ಟ್ವೀಟ್‌ ಮಾಡಿರುವ ಅವರು, ‘ಈಗಷ್ಟೇ ಬಿಡುಗಡೆಯಾಗಿರುವ ಚಿತ್ರಗಳಿಗೆ ಸರ್ಕಾರದ ಈ ನಿರ್ಧಾರವು ಆಘಾತ ತಂದಿದೆ. ಈ ನಿರ್ಧಾರದ ಹಿಂದೆ ಸೂಕ್ತವಾದ ಕಾರಣವಿರುವುದರಿಂದಾಗಿ, ಇದನ್ನು ಗೌರವಿಸುವುದೂ ನಮ್ಮ ಕರ್ತವ್ಯ. ಈ ಪರಿಸ್ಥಿತಿಯಲ್ಲೂ ಗೆದ್ದುಬರುವ ಶಕ್ತಿಯು ಯುವರತ್ನ ಚಿತ್ರತಂಡಕ್ಕೆ ಸಿಗಲಿ ಎಂದು ನಾನು ಆಶಿಸುತ್ತೇನೆ’ ಎಂದು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

- Advertisement -

ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್‌ ಮತ್ತು ಧಾರವಾಡ ಜಿಲ್ಲೆಗಳ ಸಿನಿಮಾ ಮಂದಿರಗಳಲ್ಲಿ ಗರಿಷ್ಠ ಶೇ 50 ವೀಕ್ಷಕರಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿತ್ತು. ಈ ನಿರ್ಧಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರ ನಟನೆಯ ಯುವರತ್ನ ಚಿತ್ರವು ಬಿಡುಗಡೆಯಾಗಿ ಕೇವಲ ಎರಡೇ ದಿನಕ್ಕೆ ಸರ್ಕಾರ ಈ ನಿರ್ಬಂಧ ಹಾಕಿದ್ದ ಕಾರಣ, ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Join Whatsapp