ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಹಿಂದಿ ಬರಹ: ವಿರೋಧದ ಬಳಿಕ ಅಳಿಸಿದ ಇಲಾಖೆ

Prasthutha|

►‘ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ’ ಎಂದ ಸಿದ್ದರಾಮಯ್ಯ

- Advertisement -

ಬೆಂಗಳೂರು: ‘ಹರ್ ಘರ್ ತಿರಂಗಾ’ ಕಾರ್ಯಕ್ರಮದ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಹಿಂದಿಯಲ್ಲೇ ಮಾಹಿತಿ ಪ್ರಕಟಿಸಿದ್ದು, ವಿರೋಧದ ಬಳಿಕ ಅದನ್ನು ಅಳಿಸಿ ಹಾಕಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಹಿಂದಿ ಏರಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದರು, ಈಗ ಇಲಾಖೆಯು ವೆಬ್ ಸೈಟ್ ನಲ್ಲಿರುವ ಹಿಂದಿ ಭಾಷೆಯನ್ನು ಅಳಿಸಿ ಕನ್ನಡದಲ್ಲೇ ಮಾಹಿತಿ ಪ್ರಕಟಿಸಿದೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ” ನಾನು ಚಾಟಿ ಬೀಸಿದ ನಂತರ ಸರ್ಕಾರ ಎಚ್ಚೆತ್ತುಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಅನಗತ್ಯವಾಗಿ ತುರುಕಿದ್ದ ಹಿಂದಿಯನ್ನು ಕಿತ್ತೊಗೆದಿದೆ. ಬಿಜೆಪಿ ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂತದ್ದಲ್ಲ. ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ” ಎಂದು ಬರೆದುಕೊಂಡಿದ್ದಾರೆ.



Join Whatsapp
Exit mobile version