Home ಕರಾವಳಿ ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ‘ಕನ್ನಡ ಡಿಂಡಿಮ -2022’: ಶಂಶೀರ್ ಬುಡೋಳಿಗೆ ‘ಜನಪ್ರಿಯ’ ಪುರಸ್ಕಾರ ಪ್ರದಾನ

ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ‘ಕನ್ನಡ ಡಿಂಡಿಮ -2022’: ಶಂಶೀರ್ ಬುಡೋಳಿಗೆ ‘ಜನಪ್ರಿಯ’ ಪುರಸ್ಕಾರ ಪ್ರದಾನ

ಮಂಗಳೂರು: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ನಾಡು, ನುಡಿ ಬಗ್ಗೆ ಆಸಕ್ತಿ ಮೂಡಿಸಬೇಕು. ಅದಕ್ಕೆ ಮಕ್ಕಳನ್ನು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ಶೈಕ್ಷಣಿಕ ಸಂಸ್ಥೆಗಳು ಆಯೋಜಿಸಬೇಕು. ಆಗ ಮಾತ್ರ ಮಕ್ಕಳು ಹೆಚ್ಚು ಕ್ರಿಯೇಟಿವ್ ಆಗಿ ಇರುತ್ತಾರೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ, 11 ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಸಮ್ಮೇಳನಾಧ್ಯಕ್ಷ, ಪತ್ರಕರ್ತ ಶಂಶೀರ್ ಬುಡೋಳಿ ಅಭಿಪ್ರಾಯಪಟ್ಟಿದ್ದಾರೆ.

ಅವರು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕಂಬಳಬೆಟ್ಟುವಿನಲ್ಲಿರುವ ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ನಡೆದ ‘ಕನ್ನಡ ಡಿಂಡಿಮ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಓದುವುದು, ಬರೆಸುವುದು ಮಾತ್ರ ಶಿಕ್ಷಣ ಅಲ್ಲ. ಕ್ರಿಯಾಶೀಲ ಚಟುವಟಿಕೆಗಳಲ್ಲಿ ಮಕ್ಕಳು ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ಅವರು ವಿಶೇಷವಾಗಿ ಬೆಳೆಯಲು ಸಾಧ್ಯ ಎಂದರು. ಆಡಳಿತ ಅಧಿಕಾರಿ ಸಫ್ವಾನ್ ಪಿಲಿಕಲ್ ಸಂದೇಶ ಭಾಷಣ ಮಾಡಿದರು.

ಇದೇ ವೇಳೆ ಮಾಧ್ಯಮ ಕ್ಷೇತ್ರ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದನ್ನು ಗುರುತಿಸಿ ಶಂಶೀರ್ ಬುಡೋಳಿ ಅವರನ್ನು ಗಣ್ಯರ ಸಮ್ಮುಖದಲ್ಲಿ ‘ಜನಪ್ರಿಯ’ ಪುರಸ್ಕಾರ ಮಾಡುವ ಮೂಲಕ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ಆಡಳಿತ ಮಂಡಳಿಯ ನಿರ್ದೇಶಕ ನೌಶೀನ್ ಬದ್ರಿಯಾ, ಪ್ರಾಂಶುಪಾಲೆ ಪ್ರಿಯಾ ದುರೈರಾಜ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಫೀಸಾ ಸ್ವನೀಹ ಸ್ವಾಗತಿಸಿದರು. ಶಝ್ನ ವಂದಿಸಿದರು. ಹಿಬಾ ಮರಿಯಂ ಮತ್ತು ಝುಲ್ಫಾ ಕಾರ್ಯಕ್ರಮ ನಿರೂಪಿಸಿದರು

Join Whatsapp
Exit mobile version