Home Uncategorized ವಿರಾಜಪೇಟೆ | ಕನ್ನಡ ರಾಜ್ಯೋತ್ಸವದ ಅಂಗವಾಗಿ ಪೂರ್ವ ಭಾವಿ ಸಭೆ

ವಿರಾಜಪೇಟೆ | ಕನ್ನಡ ರಾಜ್ಯೋತ್ಸವದ ಅಂಗವಾಗಿ ಪೂರ್ವ ಭಾವಿ ಸಭೆ

ವಿರಾಜಪೇಟೆ: ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುವoತೆ ತಹಶೀಲ್ದಾರ್ ಆರ್.ಯೋಗಾನಂದ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಿದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಸೂಚಿಸಿದರು. ಮತ್ತು ರಾಜ್ಯೋತ್ಸವ ದಿನದಂದು ಯಾವುದೇ ರೀತಿಯ ಮೆರವಣಿಗೆಗಳು ನಡೆಸಲಾಗುವುದಿಲ್ಲ, ಬೆಳಗ್ಗೆ 9.30 ಗಂಟೆಗೆ ಧ್ವಜಾರೋಹಣ ಹಾಗೂ ವೇದಿಕೆ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.

ಪೂರ್ವಭಾವಿ ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ. ಅಪ್ಪಣ್ಣ, ಉಪ ತಹಶೀಲ್ದಾರ್ ಪ್ರದೀಪ್ ಕುಮಾರ್, ಹೆಚ್.ಕೆ.ಪೊನ್ನು, ಕೊಡಗು ಜಿಲ್ಲೆ ಕನ್ನಡ ಜಾಗೃತಿ ಸಮಿತಿ ಸದಸ್ಯೆ ರಜಿತಾ ಕಾರ್ಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬೀಳಗಿ, ತೋಟಗಾರಿಕೆ ಇಲಾಖೆಯ ದೀನಾ, , ಪೊಲೀಸ್ ಇಲಾಖೆ, ಶಿಕ್ಷಣ, ಅಬಕಾರಿ ಇಲಾಖೆ, ಕಂದಾಯ ಇಲಾಖೆ, ಸಮಾಜ ಕಲ್ಯಾಣ, ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp
Exit mobile version