Home ಟಾಪ್ ಸುದ್ದಿಗಳು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ : ಸಚಿವ ಅರವಿಂದ ಲಿಂಬಾವಳಿ

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ : ಸಚಿವ ಅರವಿಂದ ಲಿಂಬಾವಳಿ

ಬೆಂಗಳೂರು : ಈ ತಿಂಗಳಾಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಈ ಕುರಿತು ಇಂದು ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಅವರು ವಿಷಯ ಪ್ರಕಟಿಸಿದ್ದಾರೆ.

ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ನಡೆದ ಸಿದ್ಧತೆಗಳು ಇನ್ನೂ ಅಪೂರ್ಣವಾಗಿವೆ. ಜೊತೆಗೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರುವುದರಿಂದ ಕೋವಿಡ್ ನಿಯಮಗಳ ಪಾಲನೆಯೂ ಕಷ್ಟಕರವಾಗುತ್ತದೆ. ಫೆಬ್ರವರಿ ಅಂತ್ಯಕ್ಕೆ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆಯಿರುವುದರಿಂದ, ಬಳಿಕ ಮಾ.9ಕ್ಕೆ ಮತ್ತೊಂದು ಸಭೆ ನಡೆಸಿ, ಸಮ್ಮೇಳನ ನಡೆಸುವ ಮುಂದಿನ ದಿನಾಂಕ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಗೃಹ ಹಾಗೂ ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕಾ ಸಚಿವ ಆರ್. ಶಂಕರ್, ಶಾಸಕರ ನೆಹರೂ ಓಲೇಕಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮನು ಬಳಿಗಾರ್ ಹಾಗೂ ಹಾವೇರಿ ಜಿಲ್ಲಾಡಳಿತದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Join Whatsapp
Exit mobile version