ಕನ್ನಡ ಕಿರುತೆರೆ ನಟಿ ಚೇತನಾ ರಾಜ್‌ ಸಾವು

Prasthutha|

ಬೆಂಗಳೂರು: ಬೊಜ್ಜು ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಮೃತಪಟ್ಟಿದ್ದಾರೆ.

- Advertisement -

ಚೇತನಾ ರಾಜ್‌ (21) ಮೃತಪಟ್ಟ ನಟಿ‌ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ಸಾವಿಗೀಡಾಗಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಕಲರ್ಸ್ ಕನ್ನಡದಲ್ಲಿ ಬರುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ದಾರಾವಾಹಿಗಳಲ್ಲಿ ಚೇತನಾ ರಾಜ್‌ ನಟಿಸುತ್ತಿದ್ದರು. ಇನ್ನೂ ಬಿಡುಗಡೆಯಾಗದ ಹವಾಯಾಮಿ ಸಿನಿಮಾದಲ್ಲೂ ನಟಿಸಿದ್ದಾರೆ.

Join Whatsapp