ಭೀಕರ ಅಪಘಾತ: ‘ನನ್ನಮ್ಮ ಸೂಪರ್’ಸ್ಟಾರ್’ ಖ್ಯಾತಿಯ ಬಾಲಕಿ ಸಮನ್ವಿ ದಾರುಣ ಸಾವು

Prasthutha|

ಬೆಂಗಳೂರು: ಟಿಪ್ಪರ್ ಲಾರಿ, ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ‘ನನ್ನಮ್ಮ ಸೂಪರ್’ಸ್ಟಾರ್’ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ ಅಮೃತಾ ಜೊತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಪ್ರತಿಭಾನ್ವಿತ ಬಾಲಕಿ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ

- Advertisement -

ಬೆಂಗಳೂರಿನ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬಾಲಕಿಯ ತಾಯಿ ಅಮೃತಾ ನಾಯ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್​​ ಆಸ್ಪತ್ರೆಗೆ ರವಾನೆ ಮಾಡಿದ್ದು, ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತಂತೆ ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp