Home ಟಾಪ್ ಸುದ್ದಿಗಳು ಕನ್ನಡ ಹಿರಿಯ ಸಾಹಿತಿ, ಖ್ಯಾತ ವಿಮರ್ಶಕ ಜಿ.ಎಚ್.ನಾಯಕ ನಿಧನ

ಕನ್ನಡ ಹಿರಿಯ ಸಾಹಿತಿ, ಖ್ಯಾತ ವಿಮರ್ಶಕ ಜಿ.ಎಚ್.ನಾಯಕ ನಿಧನ

ಮೈಸೂರು: ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕ, ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ (ಜಿ.ಎಚ್.ನಾಯಕ) ಅವರು ಶುಕ್ರವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.


ಅವರಿಗೆ 88 ವರ್ಷ ವಯಸ್ಸಾಗಿತ್ತು. ಬಹುಕಾಲದಿಂದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಲ್ಲಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 1935 ಸೆಪ್ಟಂಬರ್ 18 ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದಲ್ಲಿ ಜನಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಮುಂದೆ ಪ್ರಾಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ಇವರು ಮೈಸೂರಿನಲ್ಲಿ ನೆಲೆಸಿದ್ದರು.

ಸಮಕಾಲೀನ (1973 ), ಅನಿವಾರ್ಯ (1980), ನಿರಪೇಕ್ಷೆ (1984), ನಿಜದನಿ (1988), ವಿನಯ ವಿಮರ್ಶೆ (1991), ಸಕಾಲಿಕ (1995), ಗುಣ ಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ಕೃತಿ ಸಾಕ್ಷಿ (2006), ಸ್ಥಿತಿ ಪ್ರಜ್ಞೆ (2007), ಮತ್ತೆ ಮತ್ತೆ ಪಂಪ (2008), ಸಾಹಿತ್ಯ ಸಮೀಕ್ಷೆ (2009), ಉತ್ತರಾರ್ಧ (2011) ಅವರ ಬಹುಮುಖ್ಯ ಕೃತಿಗಳು.

Join Whatsapp
Exit mobile version