ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ಕನ್ನಡಿಗ ಬಿ.ಎಸ್.ರಾಜು ನೇಮಕ

Prasthutha|

ಬೆಂಗಳೂರು: ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ಕನ್ನಡಿಗರಾದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ನೇಮಕವಾಗಿದ್ದಾರೆ.

- Advertisement -

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ  ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಕನ್ನಡಿಗರಾದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರು ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ನೇಮಕ ಆಗಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಕ್ಷಣ ಮತ್ತು ಸಂಭ್ರಮದ ಸಂದರ್ಭ. ಜನರಲ್ ಬಿ.ಎಸ್.ರಾಜು ಅವರು ರಾಷ್ಟ್ರ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕದ ಪರಂಪರೆಯ ಇನ್ನೊಂದು ಗರಿ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದವರಾದ ಅವರು ಕಾಶ್ಮೀರದಲ್ಲಿ ನಡೆದ ʼಆಪರೇಷನ್ ಪರಾಕ್ರಮʼ ಸೇರಿ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿದ್ದರು. ಕನ್ನಡಾಂಬೆಯ ಹೆಮ್ಮೆಯ ಪುತ್ರ ಜನರಲ್ ರಾಜು ಅವರಿಗೆ ಶುಭವಾಗಲಿ, ಅವರ ಮುಂದಿನ ಎಲ್ಲ ಕಾರ್ಯಗಳಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.

Join Whatsapp