ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಗಲಭೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 3 ಎಫ್.ಐ.ಆರ್ ಅನ್ನು ದಾಖಲಿಸಿದ್ದು, ಸುಮಾರು 500 ಮಂದಿಯನ್ನು ಆರೋಪಿಗಳೆಂದು ಪರಿಗಣಿಸಲಾಗಿದೆ. ಘಟನೆಯಲ್ಲಿ ಪೊಲೀಸರು ಸೇರಿದಂತೆ 40 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 18 ಜನರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗಾಗಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಆನಂದ್ ಪ್ರಕಾಶ್ ತಿವಾರಿ ತಿಳಿಸಿದ್ದಾರೆ. ಗಲಭೆ ಪೀಡಿತ ಸ್ಥಳದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಜ್ಞಾನವಾಪಿ ಮಸೀದಿ – ಕಾಶಿ ದೇವಸ್ಥಾನಕ್ಕೆ ವಿವಾದದ ಮಧ್ಯೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮುಹಮ್ಮದ್ ಅವರನ್ನು ಅವಹೇಳಿಸಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಘರ್ಷಣೆ ಉಂಟಾಗಿತ್ತು.