ಕಾಂತಾರ ಸಿನಿಮಾದಲ್ಲಿ ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದೆ: ಸಮತಾ ಸೈನಿಕ ದಳ ಆರೋಪ

Prasthutha|

ಮಂಗಳೂರು: ಕಾಂತಾರ ಸಿನಿಮಾದಲ್ಲಿ ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದೆ ಎಂದು ಸಮತಾ ಸೈನಿಕ ದಳ ಗಂಭೀರ ಆರೋಪ ಮಾಡಿದೆ.

- Advertisement -

ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ, ಕಾಂತಾರ ಸಿನಿಮಾದಲ್ಲಿ ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಕೀಳಾಗಿ ಬಿಂಬಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ‘ಈ ಸಿನಿಮಾದಲ್ಲಿರುವ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಬೇಕು. ಅಲ್ಲಿಯವರೆಗೆ ಈ ಸಿನಿಮಾವನ್ನು ಪ್ರದರ್ಶಿಸಲು ಅನುಮತಿ ನೀಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.

- Advertisement -

ಸಿನಿಮಾದಲ್ಲಿ ದೈವನರ್ತಕ ಸಮುದಾಯದ ವ್ಯಕ್ತಿಗಳನ್ನು, ಮಹಿಳೆಯರನ್ನು ಮತ್ತು ಯುವ ಸಮುದಾಯವನ್ನು ಅವಮಾನ ಮಾಡುವ ದೃಶ್ಯಗಳಿವೆ. ಇದರ ಕೆಲವು ದೃಶ್ಯಗಳಿಂದ ದೈವನಿಂದನೆ ಆಗಿದೆ. ಆದರೂ ಈ ಸಿನಿಮಾ‌ಕ್ಕೆ ಚಲನಚಿತ್ರ ಸೆನ್ಸಾರ್‌ ಮಂಡಳಿಯು ಯು/ಎ ಪ್ರಮಾಣಪತ್ರವನ್ನು ನೀಡಿದ್ದು ಸರಿಯಲ್ಲ ಎಂದು ಲೋಲಾಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Join Whatsapp