ಬೆಂಗಳೂರು: ಕಾಂತರಾಜು ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯನ್ನು ನವೆಂಬರ್ 24ರೊಳಗೆ ಸರ್ಕಾರಕ್ಕೆ ಸಲ್ಲಿಕೆ ಮಾಡುತ್ತೇನೆ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಜಾತಿಗಣತಿ ವರದಿ ಸ್ವೀಕರಿಸಿ ತಿರಸ್ಕರಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಒಕ್ಕಲಿಗ ಸಮುದಾಯದ ನಾಯಕರು ತೀರ್ಮಾನಿಸಿದೆ. ಇನ್ನು ಈ ಬಗ್ಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಶ್ರೀಗಳು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಈಶ್ವರಪ್ಪ ಸಹ ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮರು ಪರಿಶೀಲನೆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ವರದಿ ಸರಿ ಇಲ್ಲ ಎಂದು ಯಾವ ಆಧಾರದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ನವೆಂಬರ್ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.