October 23, 2020

ಕಪಿಲ್ ದೇವ್ ಗೆ ಹೃದಯಾಘಾತ

ಹೊಸದಿಲ್ಲಿ: ಭಾರತದ ಮೊದಲ ಕ್ರಿಕೆಟ್ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಪಿಲ್ ದೇವ್ ರನ್ನು ಹೊಸದಿಲ್ಲಿಯ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದ್ದು, ಆಂಜಿಯೊಪ್ಲಾಸ್ಟಿ ಸರ್ಜರಿಗೆ ಒಳಪಡಿಸಲಾಗುತ್ತಿದೆ ಎನ್ನಲಾಗಿದೆ. ಭಾರತದ ಮಾಜಿ ನಾಯಕ ಮತ್ತು ಅತ್ಯುತ್ತಮ ಆಲ್ ರೌಂಡರ್ ಆಟಗಾರನಾಗಿದ್ದ ಕಪಿಲ್ 1983ರಲ್ಲಿ ಭಾರತಕ್ಕೆ ಮೊದಲ ವಿಶ್ವಕಪ್ ಟ್ರೋಫಿಯನ್ನು ತಂದುಕೊಟ್ಟಿದ್ದರು.

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020ರಲ್ಲಿ ಕಪಿಲ್ ದೇವ್ ಕ್ರಿಕೆಟ್ ಅಭಿಪ್ರಾಯಗಳನ್ನು ಹೇಳುತ್ತಾ ಕ್ರಿಯಾಶೀಲರಾಗಿದ್ದರು. ಮಾಜಿ ನಾಯಕರು ಮಧುಮೇಹ ಸಂಬಂಧಿ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರು. 1978ರಲ್ಲಿ ಪಾಕಿಸ್ತಾನ ವಿರುದ್ಧ ಆಡುವುದರೊಂದಿಗೆ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆಗೈದಿದ್ದರು.

ಟಾಪ್ ಸುದ್ದಿಗಳು

ವಿಶೇಷ ವರದಿ