ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ವಿರುದ್ಧ ದೆಹಲಿಯ ಶಹೀನ್ ಬಾಗ್ ನಲ್ಲಿ ಪ್ರತಿಭಟನೆ ನಡೆದಿದ್ದ ವೇಳೆ ಮೂರು ಸುತ್ತು ಗುಂಡು ಹಾರಿಸಿ ಭಯೋತ್ಪಾದನಾ ವಾತಾವರಣ ಸೃಷ್ಟಿಸಿದ್ದ ಕಪಿಲ್ ಗುಜ್ಜರ್ ಈಗ ಬಿಜೆಪಿ ಸೇರ್ಪಡೆಗೊಳ್ಳುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾನೆ.
ಉತ್ತರ ಪ್ರದೇಶದ ಘಾಝಿಯಾಬಾದ್ ನಲ್ಲಿ ಸ್ಥಳೀಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಪಿಲ್ ಗುಜ್ಜರ್ ಬಿಜೆಪಿ ಸೇರ್ಪಡೆಯಾಗಿದ್ದಾನೆ.
ಬಿಜೆಪಿ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಗುಜ್ಜರ್, ಬಿಜೆಪಿ ಹಿಂದುತ್ವಕ್ಕಾಗಿ ಕೆಲಸ ಮಾಡುತ್ತಿದೆ ಮತ್ತು ತಾನು ಪಕ್ಷವನ್ನು ಪ್ರತಿ ಹೆಜ್ಜೆಯಲ್ಲೂ ಬೆಂಬಲಿಸುವುದಾಗಿ ಹೇಳಿದ್ದಾನೆ.
ಶಹೀನ್ ಬಾಗ್ ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ, ಫೆ.1ರಂದು ಗುಜ್ಜರ್ ಗುಂಡು ಹಾರಾಟ ನಡೆಸಿದ್ದ. ಬಳಿಕ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ. ಬಳಿಕ ಆತನಿಗೆ ದೆಹಲಿ ನ್ಯಾಯಾಲಯ 25,000 ರೂ. ಬಾಂಡ್ ಮೂಲಕ ಜಾಮೀನು ನೀಡಿದೆ.