ಕಾಪು: ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ

Prasthutha|

ಕಾಪು: ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋವೊಂದು ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಪಾಂಗಾಳ ಸೇತುವೆಯಲ್ಲಿ ನಡೆದಿದೆ.

- Advertisement -


ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


ಘಟನೆಯಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

Join Whatsapp
Exit mobile version