ಕಾಪು: ಹೆದ್ದಾರಿಯಲ್ಲಿ ಟ್ಯಾಂಕರ್ ನಿಂದ ಅನಿಲ ಸೋರಿಕೆ

Prasthutha|

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೊಳಿ ದಂಡತೀರ್ಥ ಬಳಿ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾದ ಘಟನೆ ಶುಕ್ರವಾರ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

- Advertisement -


ಉಡುಪಿಯಿಂದ ಮಂಗಳೂರು ಕಡೆಗೆ ಲಿಕ್ವಿಡ್ ಕಾರ್ಬನ್ ಡಯಾಕ್ಸೈಡ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ನ ಮುಚ್ಚಳದಲ್ಲಿ ಸೋರಿಕೆ ಉಂಟಾಗಿ ಈ ಘಟನೆ ನಡೆಯಿತು ಎಂದು ತಿಳಿದು ಬಂದಿದೆ.


ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿಗಳು ಅಪಾಯ ಆಗದಂತೆ ತಡೆಯುವಲ್ಲಿ ಯಶಸ್ವಿಯಾದರು. ಅದೃಷ್ಟವಷಾತ್ ಯಾವುದೇ ಅಪಾಯ ಸಂಭವಿಸಿಲ್ಲ.



Join Whatsapp