ಕಾಪು: ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ನಾಪತ್ತೆಯಾಗಲು ಸಹಕರಿಸಿದ ಶಿರ್ವದ ರೂಪೇಶ್ (22), ಜಯಂತ್ (23) ಮತ್ತು ಮಜೂರು ನಿವಾಸಿ ಮೊಹಮ್ಮದ್ ಅಜೀಝ್ ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ಮತ್ತು ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಪೊಲೀಸರು ಕುಂಬ್ಳೆ ಬಳಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಲೀಲಾಧರ ಶೆಟ್ಟಿ ಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದು, ಆಕೆ ಡಿಸೆಂಬರ್ 11 ರಂದು ಏಕಾಏಕಿ ನಾಪತ್ತೆಯಾಗಿದ್ದಳು. ಈ ಘಟನೆಯಿಂದ ನೊಂದು ಸಮಾಜಕ್ಕೆ ಹೆದರಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.