ಕಾಪು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಗೆ SDPI ಬೆಂಬಲ

Prasthutha|

ಮಂಗಳೂರು: ಕಾಪು ಪುರಸಭೆ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷೀಯ ಚುನಾವಣೆಯಲ್ಲಿ SDPI ಕಾಂಗ್ರೆಸನ್ನು ಬೆಂಬಲಿಸಲಿದೆ ಎಂದು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವ ತಿಳಿಸಿದ್ದಾರೆ.

- Advertisement -

ಇಂದು (28.08.2024) ಕಾಪು ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ SDPI ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಬೆಂಬಲಿಸಲು ತನ್ನ ಪಕ್ಷದ ಪುರಸಭಾ ಸದಸ್ಯರುಗಳಿಗೆ ವಿಪ್ ನೀಡಿದೆ ಎಂದು ಅಶ್ರಫ್ ಬಾವ ಅವರು ತಿಳಿಸಿದ್ದಾರೆ.

ಪುರಸಭೆಯಲ್ಲಿ ಬಿಜೆಪಿಯನ್ನು ಸೋಲಿಸುವ ಭಾಗವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದೇವೆ ಎಂದು ಅಶ್ರಫ್ ಬಾವ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ



Join Whatsapp
Exit mobile version