ಕಾಪು | ಹುಡುಗಿಯೊಂದಿಗೆ ಮಾತನಾಡಿದ ವಿಚಾರ : ವಿದ್ಯಾರ್ಥಿಗಳ ನಡುವೆ ಹೊಡೆದಾಟ

Prasthutha|

ಕಾಪು: ಹಿಂದೂ ಹುಡುಗಿ ಜೊತೆಗೆ ಅನ್ಯ ಕೋಮಿನ ಹುಡುಗ ಮಾತನಾಡಿದ ಎಂಬ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.

- Advertisement -

ಮಧ್ಯಾಹ್ನದ ವೇಳೆಗೆ ವಿದ್ಯಾರ್ಥಿನಿಯೋರ್ವಳ ಜೊತೆ ಅನ್ಯಕೋಮಿನ ವಿದ್ಯಾರ್ಥಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ  ವಿದ್ಯಾರ್ಥಿಗಳ ನಡುವೆ ಕೆಲಹೊತ್ತು ವಾಗ್ವಾದ ನಡೆದಿದ್ದು ,  ಬಳಿಕ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಕಾಪು ಠಾಣಾ ಪೊಲೀಸರು ಆಗಮಿಸಿದ್ದು, ವಿದ್ಯಾರ್ಥಿಗಳಿಗೆ ಬು ದ್ಧಿ ಹೇಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆಂದು ತಿಳಿದು ಬಂದಿದೆ.

Join Whatsapp