ಕರಾಚಿ: ಪೊಲೀಸ್ ಮುಖ್ಯಸ್ಥರ ಕಚೇರಿ ಮೇಲೆ ಗುಂಡಿನ ದಾಳಿ| 20 ಪೊಲೀಸರು ಮೃತ್ಯು

Prasthutha|

►ಪೊಲೀಸ್ ಮುಖ್ಯಸ್ಥ ಸೇರಿದಂತೆ ಅಧಿಕಾರಿಗಳನ್ನು ಅಪಹರಿಸಿದ ದಾಳಿಕೋರರು

- Advertisement -

ಕರಾಚಿ | ಪಾಕಿಸ್ತಾನದ ಕರಾಚಿಯ ಪೊಲೀಸ್ ಮುಖ್ಯಸ್ಥರ ಕಚೇರಿ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದು, 20 ಪೊಲೀಸರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ.
ಶುಕ್ರವಾರ ಸಂಜೆ 10 ಮಂದಿ ಬಂದೂಕುಧಾರಿಗಳ ತಂಡ ಆಗಮಿಸಿ ಕಚೇರಿ ಮೇಲೆ ಗುಂಡಿನ ದಾಳಿ ನಡೆಸಿದೆ. ಪೊಲೀಸ್ ಮುಖ್ಯಸ್ಥ ಮತ್ತು ಇತರ ಕೆಲವು ಪೊಲೀಸ್ ಅಧಿಕಾರಿಗಳನ್ನು ದಾಳಿಕೋರರು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದ್ದು, ದಾಳಿಯನ್ನು ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ತೀವ್ರವಾಗಿ ಖಂಡಿಸಿದ್ದಾರೆ.

Join Whatsapp