Home ಟಾಪ್ ಸುದ್ದಿಗಳು ಕೇಂದ್ರದ ಬಳಿಕ ರಾಜ್ಯ ಸರ್ಕಾರದಿಂದಲೂ ವಾಹನ ಸವಾರರಿಗೆ ಸಿಹಿಸುದ್ದಿ

ಕೇಂದ್ರದ ಬಳಿಕ ರಾಜ್ಯ ಸರ್ಕಾರದಿಂದಲೂ ವಾಹನ ಸವಾರರಿಗೆ ಸಿಹಿಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದ ಬೆನ್ನಲ್ಲೇ, ಕರ್ನಾಟಕ ರಾಜ್ಯ ಸರ್ಕಾರವೂ ಪೆಟ್ರೋಲ್ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿತಗೊಳಿಸಿದ್ದು ಸ್ವಾಗತಾರ್ಹ ಜನರಿಗೆ ದೀಪಾವಳಿಯ ಉಡಗೊರೆ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿತಗೊಳಿಸಲು ನಿರ್ಧರಿಸಿದೆ. ಈ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಬೊಕ್ಕಸಕ್ಕೆ ನಷ್ಟವಾಗಲಿದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ ಎಂದು ಹೇಳಿದ್ದಾರೆ. ನೂತನ ದರ ರಾಜ್ಯದಲ್ಲಿ ನಾಳೆ ಸಂಜೆಯಿಂದ ಜಾರಿಗೆಬರಲಿದೆ.

ಕಳೆದ ಕೆಲವು ತಿಂಗಳಿನಿಂದ ಪ್ರತಿನಿತ್ಯ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿತ್ತು. ಕಳೆದ 36 ದಿನಗಳಲ್ಲಿ 28 ರೂಪಾಯಿ ಏರಿಕೆಯಾಗಿದೆ. ಸತತ ಏಳು ದಿನಗಳ ಕಾಲ ಏರಿಕೆ ಕಂಡಿದ್ದ ಪೆಟ್ರೋಲ್ ದರದಲ್ಲಿ ನವೆಂಬರ್ 3ರಂದು ಯಾವುದೇ ಏರಿಳಿತ ಕಂಡು ಬಂದಿಲ್ಲ.

Join Whatsapp
Exit mobile version