Home ಟಾಪ್ ಸುದ್ದಿಗಳು ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು

ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು

ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಅದರಂತೆ ಇಂದು(ಸೆ.29) ಕರ್ನಾಟಕ ಬಂದ್​‌ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆಯಿಂದಲೇ ಬಂದ್​ಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಅದರಂತೆ ಇದೀಗ ಕರವೇ ಕಾರ್ಯಕರ್ತರು ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ಏರ್ಪೋರ್ಟ್ ‌ಗೆ ಮುತ್ತಿಗೆ ಹಾಕಿದ್ದಾರೆ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಕರವೇ ಕಾರ್ಯಕರ್ತರು ಕನ್ನಡ ಬಾವುಟಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಇದೀಗ 20 ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದು, ಎಲ್ಲರನ್ನೂ ಕಾರುಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.

Join Whatsapp
Exit mobile version