ಕಾರ್ಕಳ: ನಾಪತ್ತೆಯಾಗಿದ್ದ ಹೆಡ್ ಕಾನ್ ಸ್ಟೇಬಲ್ ಮೃತದೇಹ ಪತ್ತೆ

Prasthutha|

ಕಾರ್ಕಳ: ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಶೃತಿನ್ ಶೆಟ್ಟಿ (35) ಅವರ ಮೃತದೇಹ ಕಾರ್ಕಳ ಲಕ್ಷ್ಮೀದೇವಿ ಕಲ್ಯಾಣ ಮಂಟಪ ಸಮೀಪ ಆ.23ರ ಸೋಮವಾರ ಪತ್ತೆಯಾಗಿದೆ.

- Advertisement -


ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ ಅ.19ರಂದು ಕಾಣೆಯಾಗಿದ್ದು, ಅಂದು ರಾತ್ರಿ 7.30ಕ್ಕೆ ಪತ್ನಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಅನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಶೃತಿನ್ ಪತ್ನಿ ನಾಪತ್ತೆ ದೂರು ದಾಖಲಿಸಿದ್ದರು. ನಾಪತ್ತೆ ಬಳಿಕ ಜಿಲ್ಲೆಯ ವಿವಿದೆಡೆಗಳಲ್ಲಿ ತಿರುಗಾಡುತ್ತಿದ್ದ ಅವರು ಮಣಿಪಾಲದ ಎಟಿಎಂ ಒಂದರಿಂದ ಹಣವನ್ನುನಗದೀಕರಿಸಿದ್ದರು. ಪಡುಬಿದ್ರಿ ಪೋಲೀಸರಿಂದ ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡಿದ್ದ ಶೃತಿನ್ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.