Home ಕರಾವಳಿ ಕಾರ್ಕಳ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ನಗದು ಜಪ್ತಿ

ಕಾರ್ಕಳ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ನಗದು ಜಪ್ತಿ

ಉಡುಪಿ: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ನಗದನ್ನು ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಚೆಕ್‌ಪೋಸ್ಟ್‌ ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿಗಳು ದಾಖಲೆ ಇಲ್ಲದೆ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಬೊಲೆರೊ ವಾಹನದಲ್ಲಿ ಹಣ ಸಾಗಿಸುತ್ತಿದ್ದರು ಎನ್ನಲಾಗಿದೆ.

ಚುನಾವಣಾಧಿಕಾರಿ ಮದನ್ ಮೋಹನ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ಬ್ಯಾಂಕ್‌ ಲೆಟರ್ ವಶಪಡಿಸಿಕೊಂಡಿದ್ದಾರೆ. ಸಾಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Join Whatsapp
Exit mobile version