ರಾಜ್ಯಾದ್ಯಂತ ಡಿ. 28ರಿಂದ ನೈಟ್ ಕರ್ಫ್ಯೂ ಜಾರಿ

Prasthutha|

- Advertisement -

ಬೆಂಗಳೂರು: ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ಡಿಸೆಂಬರ್ 28ರಿಂದ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5:00 ವರೆಗೂ ನೈಟ್ ಕರ್ಫ್ಯೂ ಚಾಲ್ತಿಯಲ್ಲಿರುತ್ತದೆ ಎಂದು ಅವರು ತಿಳಿಸಿದರು.

- Advertisement -

ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲಾಗಿದೆ. ಪಬ್, ಬಾರ್ ಹೋಟೆಲ್ ಸೇರಿದಂತೆ ಎಲ್ಲಾ ಅಂಗಡಿ ಮುಗ್ಗಟ್ಟುಗಳು ರಾತ್ರಿ ಹತ್ತು ಗಂಟೆಯ ನಂತರ ಸಂಪೂರ್ಣ ಬಂದ್ ಆಗಲಿದೆ

Join Whatsapp