ಕೇಂದ್ರ ಸರ್ಕಾರಕ್ಕೆ ಕರ್ನಾಟಕವೊಂದೇ ಮುಖ್ಯವಲ್ಲ: ನಳಿನ್ ಕುಮಾರ್

Prasthutha|

ಕಲಬುರಗಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕವೊಂದೇ ಮುಖ್ಯವಲ್ಲ. ಇತರೆ ರಾಜ್ಯಗಳಿಗೆ ಅಕ್ಕಿ ಪೂರೈಸುವ ಜವಾಬ್ದಾರಿ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.

- Advertisement -


ಭಾರತೀಯ ಆಹಾರ ನಿಗಮವು ರಾಜ್ಯಕ್ಕೆ ಅಗತ್ಯವಾದ ಅಕ್ಕಿ ಪೂರೈಕೆ ನಿರಾಕರಿಸಿರುವುದರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ಪ್ರತಿ ಬಡ ಕುಟುಂಬಗಳಿಗೆ 10 ಕೆ.ಜಿ. ಉಚಿತ ಅಕ್ಕಿ ನೀಡುವ ಮುನ್ನ ಪ್ರಧಾನಿ ಅಥವಾ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿಲ್ಲ. ಹೀಗಾಗಿ ಅಕ್ಕಿ ಕೊಡುವ ಯೋಜನೆಗೆ ಬೇಕಾದ ಅಕ್ಕಿಯನ್ನು ತಾನೇ ಹೊಂದಿಸಿಕೊಳ್ಳಬೇಕು ಎಂದರು.


ಕೇಂದ್ರ ಸರ್ಕಾರ ರಾಜ್ಯದೊಂದಿಗೆ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಬದಲಾಗಿ ಸಿದ್ದರಾಮಯ್ಯ ಅವರೇ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಜಾರಿಗೊಳಿಸಿದ್ದ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ, ಪಠ್ಯಪುಸ್ತಕ ಪರಿಷ್ಕರಣೆಯನ್ನು ವಾಪಸ್ ಪಡೆದಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಾರೆ ಎಂದರು.