ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಡೆದ ದಲಿತ ಯುವತಿ ಮತ್ತು ಮುಸ್ಲಿಮ್ ಯುವಕನ ವಿವಾಹಕ್ಕೆ ತಡೆವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹಕ್ಕೆ ಮುಂದಾಗಿದ್ದ ಜೋಡಿಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ನಡೆಸಿದ್ದರು.
ಬಂಧಿತರನ್ನು ಶಾಮ, ಗುರು, ಪ್ರಸಾದ್ ಮತ್ತು ಪಾರ್ತಿಭನ್ ಎಂದು ಗುರುತಿಸಲಾಗಿದೆ.
ಜೋಡಿ ಸುಮಾರು ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಮತ್ತು ಯುವತಿಯ ತಾಯಿ ಕೂಡ ಈ ಮದುವೆಗೆ ಸಂಪೂರ್ಣ ಬೆಂಬಲ ಸೂಚಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಜರಂಗದಳದ ಕಾರ್ಯಕರ್ತರು ಮದುವೆಗೆ ಅಡ್ಡಿಪಡಿಸಿ ಯುವಕನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದರು.
ಈ ಮಧ್ಯೆ ಪೊಲೀಸರು ಜೋಡಿಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದು, ಯುವಕ ನೀಡಿದ್ದ ದೂರಿನ ಆಧಾರದಲ್ಲಿ ಚಿಕ್ಕಮಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.