ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ | ಕೆಲವೆಡೆ ಬಸ್ ಗಳ ಮೇಲೆ ಕಲ್ಲೆಸೆತ ; ಪರಿಸ್ಥಿತಿ ಉದ್ವಿಗ್ನ

Prasthutha|

ಬೆಂಗಳೂರು : ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರುದ್ಧ ವಿವಿಧ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಲವೆಡೆ ಟಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಅಲ್ಲದೆ, ಕೆಲವೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಟೌನ್ ಹಾಲ್ ಮುಂದೆ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಆರಂಭವಾಗಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

- Advertisement -

ರಾಜ್ಯದ ಪರಿಸ್ಥಿತಿ ಗಮನಿಸಿದರೆ, ರಾಜ್ಯದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ಎದುರಾಗಿದೆ. ಬಿಎಂಟಿಸಿ, ಕೆಎಸ್ ಆರ್ ಟಿಸಿ, ಮೆಟ್ರೋ ಸೇವೆಗಳು ಲಭ್ಯವಿದೆ. ಮೈಸೂರಿನಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಬಂದ್ ನ ಯಾವುದೇ ಚಟುವಟಿಕೆಗಳು ಕಂಡು ಬಂದಿಲ್ಲ.

ತಮಿಳುನಾಡು ಗಡಿ ಆನೆಕಲ್ ನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಬೆಂಗಳೂರಿನ ಟೌನ್ ಹಾಲ್ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

- Advertisement -