ಕರ್ನಾಟಕ ಬಂದ್ | ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ ; ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಪೊಲೀಸರ ವಶಕ್ಕೆ

Prasthutha|

ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಹಲವು ಪ್ರತಿಭಟನೆಗಳು ಬುಗಿಲೆದ್ದಿವೆ.

ಈ ನಡುವೆ, ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿರುವ ಪ್ರಮುಖ ಸಂಘಟನೆಗಳಲ್ಲಿ ಒಂದಾಗಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಈ ವೇಳೆ ಮೌರ್ಯ ಸರ್ಕಲ್ ಬಳಿಕ ಕರವೇ ರಾಜ್ಯಾಧ್ಯಕ್ಷ ಸೇರಿದಂತೆ ಅನೇಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ನಾರಾಯಣ ಗೌಡ ಮತ್ತು ಅವರ ಬೆಂಬಲಿಗರನ್ನು ಪೊಲೀಸರು ಮೌರ್ಯ ಸರ್ಕಲ್ ಬಳಿಯೇ ತಡೆದು, ನಾರಾಯಣ ಗೌಡ ಸೇರಿದಂತೆ ಹಲವು ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -