ನಾಳಿನ ಬಂದ್‌’ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ: ಬೊಮ್ಮಾಯಿ

Prasthutha|

- Advertisement -

ಹುಬ್ಬಳ್ಳಿ: ಶುಕ್ರವಾರದ ಬಂದ್‌ ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ 3,000 ಕ್ಯೂಸೆಕ್ ಆದೇಶ ಬಂದಿದೆ. 10,000 ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್‌ ನಲ್ಲಿ ವಾದ ಮಂಡನೆ ಮಾಡಿದ್ದರೆ ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ ಬಂದಿದೆ. ಜನ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ. ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ. ತಮಿಳುನಾಡು ಟ್ರಿಬ್ಯುನಲ್ ಆದೇಶವನ್ನು ಉಲ್ಲಂಘನೆ ಮಾಡಿದೆ.