ಸೋಮವಾರ ಕರ್ನಾಟಕ ಬಂದ್ ದಿನಾಂಕ ಘೋಷಣೆ ಮಾಡುತ್ತೇವೆ: ವಾಟಾಳ್ ನಾಗರಾಜ್

Prasthutha|

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಸೋಮವಾರ ಅಖಂಡ ಕರ್ನಾಟಕ ಬಂದ್ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

- Advertisement -


ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಂದ್ ದಿನದಂದು ಎಲ್ಲರೂ ಮನೆಯಲ್ಲಿ ಇದ್ದು ಸ್ಪಂದಿಸುವಂತೆ ಮನವಿ ಮಾಡಿದರು.


26 ರಂದು ಬಂದ್ ಗೆ ಕರೆ ನೀಡಿರುವುದಕ್ಕೆ ನನ್ನ ವಿರೋಧ ವಿಲ್ಲ. ಅವರ ಜೊತೆಗೆ ಮಾತಾಡುತ್ತೇವೆ, ಎಲ್ಲರೂ ಒಟ್ಟಿಗೆ ಸೇರಿ ಅಖಂಡ ಕರ್ನಾಟಕ ಬಂದ್ ಮಾಡೋಣ ಅಂತ ಮನವಿ ಮಾಡುತ್ತೇವೆ. ಎಲ್ಲರೂ ಸೇರಿ ಬಂದ್ ಮಾಡಿದರೆ ಹೋರಾಟಕ್ಕೆ ಒಂದು ಶಕ್ತಿ ಬರಲಿದೆ ಎಂದರು.

Join Whatsapp