ಕರ್ನಾಟಕ ಬಂದ್: ಸ್ಯಾಂಡಲ್ ವುಡ್ ನಟ-ನಟಿಯರಿಂದ ಪ್ರತಿಭಟನೆ

Prasthutha|

ಬೆಂಗಳೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಕಾವೇರಿಗಾಗಿ ಬೀದಿಗಿಳಿಯಲಿರುವ ಸ್ಯಾಂಡಲ್ ವುಡ್ ತಾರೆಯರು, ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಗುರುರಾಜ್ ಕಲ್ಯಾಣ ಮಂಟಪದಲ್ಲಿ ನಡೆದ ಹೋರಾಟಕ್ಕೆ ಸಾಥ್ ನೀಡಿದರು.

- Advertisement -


ನಟರಾದ ಶಿವರಾಜ್ ಕುಮಾರ್, ಉಪೇಂದ್ರ, ಶ್ರೀಮುರಳಿ, ದರ್ಶನ್, ಲೂಸ್ ಮಾದ ಯೋಗಿ, ಚಿಕ್ಕಣ್ಣ, ಶ್ರೀನಾಥ್, ಓಂ ಸಾಯಿ ಪ್ರಕಾಶ್, ರಘು ಮುಖರ್ಜಿ, ತಬಲ ನಾಣಿ, ಶ್ರೀಮುರಳಿ ವಿಜಯರಾಘವೇಂದ್ರ, ಶ್ರೀನಿವಾಸ್ ಮೂರ್ತಿ, ನಟಿಯರಾದ ಉಮಾಶ್ರೀ, ಪೂಜಾಗಾಂಧಿ, ಅನು ಪ್ರಭಾಕರ್, ರೂಪಿಕಾ, ಶೃತಿ, ಫಿಲ್ಮ್ ಚೇಂಬರ್ ಸದಸ್ಯರು ಸೇರಿದಂತೆ ನೂರಾರು ಕಿರುತೆರೆ ಕಲಾವಿದರು ಭಾಗವಹಿಸಿದ್ದರು.

Join Whatsapp