Home ಟಾಪ್ ಸುದ್ದಿಗಳು ಹಿಜಾಬ್ ನಿಷೇಧ ವಿರೋಧಿಸಿ ನಾಳೆ ಕರ್ನಾಟಕ ಬಂದ್

ಹಿಜಾಬ್ ನಿಷೇಧ ವಿರೋಧಿಸಿ ನಾಳೆ ಕರ್ನಾಟಕ ಬಂದ್

ಬೆಂಗಳೂರು: ಹಿಜಾಬ್ ವಿಷಯದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ನಿರಾಶದಾಯಕವಾಗಿದ್ದು, ತೀರ್ಪು ವಿರೋಧಿಸಿ ಮಾರ್ಚ್ 17ರಂದು ಕರ್ನಾಟಕ ಬಂದ್ ನಡೆಸಬೇಕು ಎಂದು ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿದ್ದಾರೆ.
ಮಾರ್ಚ್ 17 ಗುರುವಾರ ಎಲ್ಲರೂ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ವಿರೋಧವನ್ನು ವ್ಯಕ್ತಿಪಡಿಸಬೇಕು. ನ್ಯಾಯಕ್ಕಾಗಿ ಒತ್ತಾಯಿಸಿ ಈ ಬಂದ್ ಕರೆ ನೀಡಲಾಗಿದ್ದು, ಬಂದ್ ಶಾಂತಿಯುತವಾಗಿಬೇಕು. ಬಲವಂತದ ಬಂದ್ ನಡೆಸಬಾರದು. ಜಾಥಾ, ಮೆರವಣಿಗೆ ಕೂಡ ನಡೆಸಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗವಲ್ಲ ಎಂದು ಕರ್ನಾಟಕ ಹೈಕೋರ್ಟ್ ನಿನ್ನೆ ತೀರ್ಪು ನೀಡಿತ್ತು.

Join Whatsapp
Exit mobile version