ಕರ್ನಾಟಕ ಬಂದ್ | ಬುರ್ಖಾ ಧರಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

Prasthutha|

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವುದು ಖಂಡಿಸಿ ಇಂದು ರೈತ ಪರ ಮತ್ತು ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಬುರ್ಖಾ ಧರಿಸಿ, ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಬುರ್ಖಾ ಧರಿಸಿ ಮೆರವಣೆಗೆ ನಡೆಸಿದ್ದಾರೆ.

- Advertisement -


ಕಾವೇರಿಗಾಗಿ ನಾವು ಕರ್ನಾಟಕ ಬಂದ್ ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್ ಮಾಡಲು ಹೊರಟಿದೆ ಎಂದು ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು ಬಂದ್ ನಡೆಯುತ್ತಿದೆ. ನಾವು ಕಾವೇರಿಗಾಗಿ ಬಂದ್ ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್ ಮಾಡುತ್ತಿದೆ. ಸರ್ಕಾರ ಕಾವೇರಿ ಸಮಸ್ಯೆಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಿಟ್ಟು ಹೊರಹಾಕಿದರು. ಬಂದ್ಗೆ ಬೆಂಬಲ ನೀಡಿದ ಜನತೆಗೆ ಧನ್ಯವಾದ ಹೇಳಿದ ವಾಟಾಳ್, ಅಖಂಡ ಕರ್ನಾಟಕ ಹೆಸರನ್ನು ಕನ್ನಡಿಗರು ಉಳಿಸಿದ್ದಾರೆ. ದೇಶಕ್ಕೆ ಕನ್ನಡಿಗರ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.

Join Whatsapp