ಕರ್ನಾಟಕ ಬಂದ್ ಮಾಡುವುದರಿಂದ ಉಪಯೋಗವಿಲ್ಲ: ಗೃಹ ಸಚಿವ ಪರಮೇಶ್ವರ್

Prasthutha|

ಬೆಂಗಳೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಇನ್ನು ಈ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ ಪ್ರತಿಕ್ರಿಯಿಸಿದ್ದು, ಬಂದ್ ಮಾಡುವುದರಿಂದ ಉಪಯೋಗವಿಲ್ಲ. ಹೋರಾಟಗಾರರು ಕಾನೂನು ರೀತಿಯಲ್ಲಿ ನಡೆದುಕೊಳ್ಳಬೇಕು, ರಾಜ್ಯದ ಹಿತ ಕಾಪಾಡಬೇಕು ಎಂದು ಮನವಿ ಮಾಡಿದರು.

- Advertisement -


ಈ ಬಗ್ಗೆ ಮಾತನಾಡಿದ ಪರಮೇಶ್ವರ್, ಕಾನೂನಿನ ಪ್ರಕಾರ ಬಂದ್ ಮಾಡಬಾರದು. ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಪ್ರತಿಭಟನೆ, ಬಂದ್ ಮಾಡುವವರಿಗೆ ಮನವಿ ಮಾಡಿದ್ದೇನೆ. ಮುಂದುವರೆದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದೇವೆ. ಹಾಗಾಗಿ ಸಹಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.



Join Whatsapp