ಮರಾಠ ಅಭಿವೃದ್ಧಿ ನಿಗಮ ಖಂಡಿಸಿ ಡಿ.5ಕ್ಕೆ ಕರ್ನಾಟಕ ಬಂದ್ ಗೆ ನಿರ್ಧಾರ

Prasthutha|

ಬೆಂಗಳೂರು : ಮರಾಠ ಅಭಿವೃದ್ಧಿ ನಿಗಮ ಖಂಡಿಸಿ ಕನ್ನಡಪರ ಸಂಘಟನೆಗಳು ಡಿ.5ರಂದು ಕರ್ನಾಟಕ ಬಂದ್ ನಡೆಸಲು ನಿರ್ಧರಿಸಿವೆ. ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕ ಬಂದ್ ನಡೆಸುವ ಬಗ್ಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಪೂರ್ವಭಾವಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿ.5ರಂದು ಬಂದ್ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

- Advertisement -

ಮರಾಠ ಪ್ರಾಧಿಕಾರ ರಚನೆ ಆದೇಶವನ್ನು ವಾಪಾಸ್ ಪಡೆಯುವಂತೆ ಈ ಹಿಂದೆ ಕನ್ನಡಪರ ಸಂಘಟನೆಗಳು ನ.27ಕ್ಕೆ ಗಡುವು ನೀಡಿದ್ದವು. ಈ ನಡುವೆಯೇ ಇದೀಗ ಡಿ.5ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

- Advertisement -