ಅನುದಾನ ನೀಡದ ಆರೋಪ | ತುಮಕೂರು ಬಿಜೆಪಿ ಶಾಸಕ ರಾಜೀನಾಮೆಗೆ ನಿರ್ಧಾರ

Prasthutha|

ತುಮಕೂರು: ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ತುರುವೇಕೆರೆ ಶಾಸಕ ಮಸಾಲೆ ಜಯರಾಂ ರಾಜಿನಾಮೆಗೆ ನಿರ್ಧರಿಸಿದ್ದಾರೆ.ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಯರಾಂ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಇಬ್ಬರೂ ಅನುದಾನ ನೀಡಿಲ್ಲ. ಹಾಗಾಗಿ ನವೆಂಬರ್ 1ರಂದು ರಾಜಿನಾಮೆ ನೀಡುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

- Advertisement -

ನನಗೆ ಸಾಂಬಾರು ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಆದರೆ ಇದುವರೆಗೂ ಒಂದು ಪೈಸೆ ಅನುದಾನ ನೀಡಿಲ್ಲ. ನಿಗಮದ ಸಿಬ್ಬಂದಿಗೆ ಸ್ವಂತ ಖರ್ಚಿನಲ್ಲಿ ಕಾಫಿ, ಟೀ ಕೊಡಿಸಬೇಕಾದ ಪರಿಸ್ಥಿತಿ ಬಂದಿದೆ. ಇದೇ ಪರಿಸ್ಥಿತಿ ಮುಂದುವರಿದರೆ ನವೆಂಬರ್ 1ರಂದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ.

ಪಕ್ಷದ ಬಾವುಟ ಹಿಡಿಯದವರಿಗೂ ಪಕ್ಷದಲ್ಲಿ ಸ್ಥಾನಮಾನ ನೀಡಲಾಗಿದೆ ಎಂದ ಅವರು, ಹಳೆಯ ಬಿಜೆಪಿ ಕಾರ್ಯಕರ್ತರಿಗೆ ಮಹತ್ವ ಸಿಗುತ್ತಿಲ್ಲ. ಈ ವಿಷಯವನ್ನು ಹಲವು ಬಾರಿ ನಾಯಕರ ಗಮನಕ್ಕೆ ತಂದಿದ್ದರೂ ಯಾರೊಬ್ಬರೂ ಗಮನ ಹರಿಸುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.ಈಗ ನನಗೆ ವಹಿಸಿರುವ ಸಾಂಬಾರು ಮಂಡಳಿ ಅಧ್ಯಕ್ಷ ಸ್ಥಾನವನ್ನು ಸ್ವೀಕರಿಸುವುದಿಲ್ಲ. ಅನುದಾನವೇ ನೀಡದಿದ್ದರೆ ನಾನು ಅಲ್ಲಿ ಕುಳಿತು ಏನು ಮಾಡಲಿ. ಇದು ನನಗೆ ನೋವು ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Join Whatsapp