Home ರಾಜ್ಯ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ: ಹಾನಗಲ್ -ಶಿವರಾಜ್ ಸಜ್ಜನ್, ಸಿಂಧಗಿ- ರಮೇಶ್ ಭೂಸನೂರು

ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ: ಹಾನಗಲ್ -ಶಿವರಾಜ್ ಸಜ್ಜನ್, ಸಿಂಧಗಿ- ರಮೇಶ್ ಭೂಸನೂರು

ಬೆಂಗಳೂರು: ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಈ ಮಧ್ಯೆ ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಹಾನಗಲ್ ಕ್ಷೇತ್ರಕ್ಕೆ ಶಿವರಾಜ್ ಸಜ್ಜನ್ ಹಾಗೂ ಸಿಂಧಗಿ ಕ್ಷೇತ್ರಕ್ಕೆ ರಮೇಶ್ ಭೂಸನೂರು ಅವರನ್ನು ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಸಮ್ಮತಿ ನೀಡಿದ್ದಾರೆ.

ಈಗಾಗಲೇ ಈ ಕ್ಷೇತ್ರಗಳಿಗೆ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಸಿಂದಗಿ ಕ್ಷೇತ್ರಕ್ಕೆ ಅಶೋಕ ಮನಗೂಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಶ್ರೀನಿವಾಸ ವಿ ಮಾನೆ ಅವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ
ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು, ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ.
ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಸಿಂಧಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರು ಮೃತಪಟ್ಟ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ.

 

 

 

 

 


ಈಗಾಗಲೇ ಈ ಕ್ಷೇತ್ರಗಳಿಗೆ ಕಾಂಗ್ರೆಸ್
ಕೂಡ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಸಿಂದಗಿ
ಕ್ಷೇತ್ರಕ್ಕೆ ಅಶೋಕ
ಮನಗೂಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ
ಶ್ರೀನಿವಾಸ ವಿ ಮಾನೆ ಅವರ
ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ  

ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಿಗೆ
ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು,
ನವಂಬರ್ 2 ರಂದು ಮತ ಎಣಿಕೆ
ನಡೆಯಲಿದೆ.

ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು.
ಸಿಂಧಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು.
ಅವರು ಮೃತಪಟ್ಟ ಹಿನ್ನೆಲೆಯಲ್ಲಿ
ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ.

Join Whatsapp
Exit mobile version