ಕರ್ನಾಟಕ ಉಪಚುನಾವಣೆ ದಿನಾಂಕ ಪ್ರಕಟ : ಎರಡು ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭೆಗೆ ಚುನಾವಣೆ
Prasthutha: March 16, 2021

ಕರ್ನಾಟಕದ ಎರಡು ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಮುಂದಿನ ತಿಂಗಳು 17ರಂದು ಚುನಾವಣೆಗೆ ದಿನಾಂಕ ನಿಗದಿಯಾಗಿದೆ.
ಸುರೇಶ್ ಅಂಗಡಿ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ, ಬಿ ನಾರಾಯಣ್ ರಾವ್ ನಿಧನದಿಂದ ತೆರವಾಗಿದ್ದ ಬಸವಕಲ್ಯಾಣ ವಿಧಾನಸಭೆ ಹಾಗೂ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆಯಿಂದ ತೆರವಾಗಿರುವ ಮಸ್ಕಿ ವಿಧಾನಸಭೆಗೆ ಉಪಚುನಾವಣೆ ನಡೆಯಲಿದೆ.
ಮಾರ್ಚ್ 23ರಂದು ಅಧಿಸೂಚನೆ ಹೊರಡಿಸ್ಲಿದ್ದು, ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಎಪ್ರಿಲ್ 17ರಂದು ಚುನಾವಣೆ ನಡೆದು ಮೇ 2 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.
