ಚೆನ್ನೈ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಿಗೆ KSRTC ಹೆಸರು ಬಳಕೆ ಮಾಡುತ್ತಿರುವುದನ್ನು ಪ್ರಶ್ನಿಸಿ ಕೇರಳ RTC ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದ್ದು, ಹೆಸರು ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಕರ್ನಾಟಕ ಪಡೆದಿರುವ KSRTC ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಕೇರಳ RTC ವಾದಿಸಿತ್ತು. KSRTC, ಕೇರಳ RTC ವಾದ ಆಲಿಸಿದ ಮದ್ರಾಸ್ ಹೈಕೋರ್ಟ್ ಕೇರಳ ಸಾರಿಗೆ ಸಂಸ್ಥೆಯ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಭರ್ಜರಿ ಜಯ ಸಿಕ್ಕಿದೆ.