ಕಾಣಿಕೆ ಡಬ್ಬಿಗೆ ಕಾಂಡೋಮ್: ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕರ್ನಾಟಕ ಕ್ರೈಸ್ತ ಸಂಘಟನೆ ಒತ್ತಾಯ

Prasthutha|

ಬೆಂಗಳೂರು: ಕೊರಗಜ್ಜನ ಕಾಣಿಕೆ ಡಬ್ಬಿಗೆ ಕಾಂಡೋಮ್ ಹಾಕಿರುವ ದೇವದಾಸ್ ದೇಸಯಿ ಇವರ ಕೃತ್ಯ ಖಂಡನೀಯ ಎಂದು ಕರ್ನಾಟಕ ಕ್ರೈಸ್ತ ಸಂಘಟನೆ ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ ಹೇಳಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕೊರಗಜ್ಜನ ಕಾಣಿಕೆ ಡಬ್ಬಿಗೆ ಕಾಂಡೋಮ್ ಹಾಕಿರುವುದು ಕೋಮು ಸಾಮರಸ್ಯವನ್ನು ಕೆಡಿಸಲು ಮಾಡಿದ ಕೃತ್ಯ. ಆರೋಪಿಗೆ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆಯನ್ನು ಕೊಡಬೇಕು. ಇಂತಹ ಕಾರ್ಯಗಳನ್ನು ಯಾರೇ ಮಾಡಿದರೂ ಕಾನೂನಿನ ಪ್ರಕಾರ ಇವರಿಗೆ ತಕ್ಕ ಶಿಕ್ಷೆಯಾಗಬೇಕು. ಸಮಾಜದಲ್ಲಿ ಭಾವೈಕ್ಯತೆಯಿಂದ ಬಾಳಲು ದಾರಿ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

Join Whatsapp